ಕಾರು ಅಪಘಾತ ➤ ಎಂಟು ಮಂದಿ ಮೃತ್ಯು.!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 24. ಶಬರಿಮಲೆಯಿಂದ ವಾಪಸಾಗುತ್ತಿದ್ದ ಭಕ್ತರ ಕಾರೊಂದು ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಥೇಣಿ ಜಿಲ್ಲೆಯಲ್ಲಿ ವರದಿಯಾಗಿದೆ.

ಮೃತರಲ್ಲಿ ಅಪ್ರಾಪ್ತ ಬಾಲಕ ಸೇರಿದ್ದು, ಜಿಲ್ಲೆಯ ಆಂಡಿಪಟ್ಟಿ ನಿವಾಸಿಗಳು. ಇವರೆಲ್ಲರೂ ಶಬರಿಮಲೆಗೆ ಹೋಗಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಡ್ಡಗಾಡು ಮಾರ್ಗದ ತಿರುವಿನಲ್ಲಿ ವಾಹನ ಚಲಾಯಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಏಳು ಜನರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group