(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 24. ವಿಶ್ವದಾದ್ಯಂತ ಕೊರೊನಾ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಹಿನ್ನಲೆ ಶಿಕ್ಷಣ ಸಂಸ್ಥೆಗಳಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ. ಇನ್ನು ಸರ್ಕಾರ ಸಾರ್ವಜನಿಕರಿಗೆ ಅಥವಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗೈಡ್ಸ್ ಲೈನ್ಸ್ ಬಿಡುಗಡೆ ಮಾಡುವ ಮುನ್ನವೇ ಖಾಸಗಿ ಶಾಲೆಗಳು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ.
ಖಾಸಗಿ ಶಾಲೆಯ ಆಡಳಿತ ಮಂಡಳಿಗಳ ಜೊತೆ ರುಪ್ಸಾ ಪದಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಮತ್ತೆ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರದ ಬಗ್ಗೆ ಚರ್ಚೆಯನ್ನು ನಡೆಸಿದ್ದಾರೆ. ಇನ್ನು ಚರ್ಚೆ ನಡೆಸಿದ ಬಳಿಕ ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಮಾಸ್ಕ್ ಕಡ್ಡಾಯಗೊಳಿಸಿದ್ದಾರೆ. ಇನ್ನು ಅವಶ್ಯಕತೆ ಇದ್ರೆ ಆನ್ ಲೈನ್ ಕ್ಲಾಸ್ ತರಗತಿ ನಡೆಸುವ ಬಗ್ಗೆಯೂ ಚರ್ಚೆಯನ್ನು ನಡೆಸಿದ್ದಾರೆ ಎನ್ನಲಾಗಿದೆ.