(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 24. ಕೋವಿಡ್ -19 ಸಾಂಕ್ರಾಮಿಕದ ಬಗ್ಗೆ ಗಾಬರಿಯಾಗಬೇಕಿಲ್ಲ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸಭೆ ನಡೆಸಿ, ಬೂಸ್ಟರ್ ಡೋಸ್ ಗಳನ್ನು ಕೊಡಲು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ದೊಡ್ಡ ಪ್ರಮಾಣದ ಶಿಬಿರಗಳನ್ನು ಏರ್ಪಡಿಸುವುದು, ಪರೀಕ್ಷೆಗಳನ್ನು ನಡೆಸುವುದು, ಪ್ರತಿಯೊಂದು ಐಎಲ್ ಐ, ಮಾಸ್ಕ್ ಧರಿಸುವುದು ಹಾಗೂ ಅಂತರ ಕಾಪಾಡುವುದು ಮೊದಲಾದ ಕ್ರಮ ಕೈಗೊಳ್ಳಲಾಗುವುದು ಎಂದರು.
Also Read ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಕೊರೋನಾ ಇಳಿಕೆ ➤ 24 ಗಂಟೆಗಳಲ್ಲಿ 117 ಮಂದಿಗೆ ಕೊರೋನಾ ಪಾಸಿಟಿವ್