ಮಂಗಳೂರು: ಅಪರಿಚಿತ ತಂಡದಿಂದ ಚೂರಿ ಇರಿತ

Crime


(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24. ಇಬ್ಬರು ದುಷ್ಕರ್ಮಿಗಳು ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ನಗರದ ಹೊರವಲಯದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ.







ಚೂರಿ ಇರಿತಕ್ಕೊಳಗಾದವರನ್ನು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದೆ. ಕೃಷ್ಣಾಪುರದ ನೈತಂಗಡಿ ಎಂಬಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದ ಜಲೀಲ್ ಗೆ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.






 

error: Content is protected !!
Scroll to Top