ತಂಡದಿಂದ ಚೂರಿ ಇರಿತ ➤ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24. ಅಪರಿಚಿತ ತಂಡದಿಂದ ಚೂರಿ ಇರಿತಕ್ಕೊಳಗಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತ ವ್ಯಕ್ತಿಯನ್ನು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದೆ. ಕೃಷ್ಣಾಪುರದ ನೈತಂಗಡಿ ಎಂಬಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದ ಜಲೀಲ್ ಗೆ ಶನಿವಾರ ರಾತ್ರಿ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಚೂರಿಯಿಂದ ಇರಿದು ಪರಾರಿಯಾಗಿದ್ದರು. ಗಂಭೀರ ಗಾಯಗೊಂಡಿದ್ದ ಜಲೀಲ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

Also Read  ರಾಷ್ಟ್ರವನ್ನೇ ತಲ್ಲಣಗೊಳಿಸಿದ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ➤ ಪತ್ನಿ ಸೇರಿ ಮೂವರಿಗೆ ಜೀವಿತಾವಧಿ ಜೈಲು ಶಿಕ್ಷೆ

error: Content is protected !!
Scroll to Top