ಅಂತರ್ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಬೆಟ್ಟಂಪಾಡಿ ಸರಕಾರಿ ಪದವಿಪೂರ್ವ ಕಾಲೇಜು ಪ್ರಥಮ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 26. ಪ್ರತಿಷ್ಠಿತ ಅಕ್ಷಯ ಕಾಲೇಜು ಸಂಪ್ಯ ಪುತ್ತೂರು ಇಲ್ಲಿ ಡಿ. 23ರಂದು ನಡೆದ ಅಂತರ್ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬೆಟ್ಟಂಪಾಡಿ ಇಲ್ಲಿನ ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ಮುಹಮ್ಮದ್ ಸಿಂಸಾರುಲ್ ಹಕ್, ಯೂಸುಫ್ ಅಲಿ ಸಲೀಲ್ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಮಹಮ್ಮದ್ ಸುಹೈಲ್ ಇವರ ತಂಡ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ.

ಸದ್ರಿ ಸ್ಪರ್ಧಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಕೊಡಗು ಜಿಲ್ಲೆ ಹಾಗೂ ಕಾಸರಗೋಡು ಜಿಲ್ಲೆಯ ಕಾಲೇಜ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Scroll to Top