ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ವದೆಹಲಿ, ಡಿ. 26. ಕೇಂದ್ರ ಹಣಕಾಸು ಹಾಗೂ ಕಾರ್ಪೊರೇಟ್‌ ಸಚಿವೆ ನಿರ್ಮಲಾ ಸೀತಾರಾಮನ್‌ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್‌ ಮೂಲಕ ಮಾಹಿತಿ ನೀಡಿದೆ.

 

63 ವರ್ಷ ವಯಸ್ಸಿನ ಕೇಂದ್ರ ಸಚಿವೆಯನ್ನು ಸೋಮವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಆಸ್ಪತ್ರೆಗೆ ಕರೆದೊಯ್ದಿದ್ದು, ಸಚಿವೆಯನ್ನು ಖಾಸಗಿ ವಾರ್ಡ್‌ನಲ್ಲಿ ಸಾಮಾನ್ಯ ತಪಾಸಣೆಗಾಗಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Scroll to Top