(ನ್ಯೂಸ್ ಕಡಬ) newskadaba.com ವಿಟ್ಲ, ಡಿ.01. ಬೈಕ್ ಮತ್ತು ಟಿವಿಎಸ್ ಜುಪಿಟರ್ ಮಧ್ಯೆ ಢಿಕ್ಕಿ ಸಂಭವಿಸಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಶುಕ್ರವಾರ ರಾತ್ರಿ ನಡೆದಿದೆ.
ಗಾಯಗೊಂಡ ಬೈಕ್ ಸವಾರನನ್ನು ಉಪ್ಪಿನಂಗಡಿ ನಿವಾಸಿ ಮುಸ್ತಫಾ ಮತ್ತು ಜುಪಿಟರ್ ಸವಾರ ಗಡಿಯಾರ ನಿವಾಸಿ ಝುಬೈರ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.