(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದ್ದು, ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳನ್ನು ಆತಂಕಕ್ಕೆ ತಳ್ಳಿದೆ.
ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಕೊರೋನಾ ಪಾಸಿಟಿವ್ ಬಂದ ಪ್ರಯಾಣಿಕರ ವಿವರಗಳನ್ನು ಖಚಿತಪಡಿಸಿಕೊಳ್ಳಲು ಬಿಬಿಎಂಪಿ ಮತ್ತು ರಾಜ್ಯ ಆರೋಗ್ಯ ಇಲಾಖೆ ದಿನವಿಡೀ ಸರಣಿ ಸಭೆಗಳನ್ನು ನಡೆಸಿದೆ, ಈಗಾಗಲೇ ಆಗ್ರಾದಲ್ಲಿ ಕೋವಿಡ್ ಪಾಸಿಟಿವ್ ಆಗಿರುವ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಆತನ ಬಗ್ಗೆ ಹೆಚ್ಚಿನ ವಿವರಗಳನ್ನು ವಿಮಾನ ನಿಲ್ದಾಣ ಅಧಿಕಾರಿಗಳಿಂದ ಬಿಬಿಎಂಪಿ ಕೇಳಿದೆ ಎಂದು ಹೇಳಿದ್ದಾರೆ.