ಎರಡು ತಲೆ ಹಾವು ಮಾರಾಟಕ್ಕೆ ಯತ್ನ ➤ ಪಿಡಿಒ ಸೇರಿ ಮೂವರ ಬಂಧನ                                 

(ನ್ಯೂಸ್ ಕಡಬ) newskadaba.com ತಿಪಟೂರು, ಡಿ. 27. ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ಪಿಡಿಒ ಸೇರಿ ಮೂವರನ್ನು ಪೊಲೀಸ್ ಇಲಾಖೆ ಬಂಧಿಸಿದ ಘಟನೆ ತುಮಕೂರಿನಲ್ಲಿ ವರದಿಯಾಗಿದೆ.

ಬಂಧಿತ ಆರೋಪಿಗಳನ್ನು ಶೇಕ್ ಹುಸೇನ್, ಮೊಹಮ್ಮದ್ ಆರೀಫ್ ಎಂದು ಗುರುತಿಸಲಾಗಿದೆ. ಜನರಲ್ಲಿ ಮೂಢನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡ ಆರೋಪಿಗಳು, ಎರಡು ತಲೆ ಹಾವಿನಿಂದ ಐಶ್ವರ್ಯ ವೃದ್ಧಿಸುತ್ತದೆ, ಈ ಹಾವು ಕೋಟ್ಯಂತರ ಬೆಲೆ ಬಾಳುತ್ತದೆ ಎಂದು ಸುಳ್ಳು ಹೇಳಿ ಜನರನ್ನು ವಂಚಿಸಲು ಯತ್ನಿಸುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಮೂವರನ್ನು ಬಂಧಿಸಿ, ಹಾವನ್ನು ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ

Scroll to Top