(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 27. ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಲ್ಲುಗುಂಡಿಯ ಗೂನಡ್ಕ ಕಡೆಪಾಲ ಬಳಿ ವರದಿಯಾಗಿದೆ.
ಕಳೆದ 4 ದಿನಗಳಿಂದ ಕಲ್ಲುಗುಂಡಿ ಆರಂತೋಡು ಪರಿಸರದಲ್ಲಿ ತಿರುಗಾಡುತ್ತಿದ್ದ ಅಪರಿಚಿತ ವ್ಯಕ್ತಿ ಸ್ಕೂಟಿಗೆ ಬಲಿಯಾಗಿದ್ದಾರೆ. ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕಲ್ಲುಗುಂಡಿ ಪೋಲಿಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.