ಮಂಗಳೂರು: ಇಂದು ನಡೆಯಲಿರುವ ಬೃಹತ್ ಹಕ್ಕೊತ್ತಾಯ ಸಭೆಗೆ SDPI ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 27. ಸುರತ್ಕಲ್ ಜಲೀಲ್ ಹತ್ಯೆ ಖಂಡಿಸಿ ಹಾಗೂ ಸರ್ಕಾರ ನಡೆದುಕೊಂಡ ತಾರತಮ್ಯ ನೀತಿಯನ್ನು ವಿರೋಧಿಸಿ ಎಸ್ಎಸ್ಎಫ್ ಹಾಗೂ ಎಸ್ ವೈಎಸ್ ಸಂಘಟನೆ ವತಿಯಿಂದ ಇಂದು ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿಯು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಎಸ್ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ. 27 ಮಂಗಳವಾರದಂದು ಸಂಜೆ 3 ಗಂಟೆಗೆ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ಪ್ರಜಾಸತ್ತಾತ್ಮಕವಾಗಿ ನಡೆಯುವ ಪ್ರತಿಭಟನೆಯಲ್ಲಿ ಜಾತಿ ಭೇದ ಮರೆತು ಎಲ್ಲರೂ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಅವರು ವಿನಂತಿಸಿದ್ದಾರೆ.

Also Read  ಅರಂತೋಡು: ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ಯೋಗ ಪೂರಕವಾಗಿದೆ ➤ ಯೋಗ ಶಿಕ್ಷಕ ರಾಮಕೃಷ್ಣ ಭಟ್

error: Content is protected !!
Scroll to Top