ಶಾಲಾ ಪ್ರವಾಸದ ಬಸ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ. 27. ಸರಕಾರಿ ಬಸ್ ಮತ್ತು ಮಕ್ಕಳು ಪ್ರವಾಸ ಹೋಗುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಹಲವರು ಗಾಯಗೊಂಡ ಘಟನೆ ಬೆಳ್ತಂಗಡಿಯ ನಿಡ್ಲೆ ಸಮೀಪದ ಬೂಡುಜಾಲು ಎಂಬಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಹೋಗುತ್ತಿದ್ದ ಸರಕಾರಿ ಬಸ್ ಹಾಗೂ ರಾಯಚೂರಿನಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಟೂರಿಸ್ಟ್ ಬಸ್ ನಡುವೆ ಢಿಕ್ಕಿ ಸಂಭವಿಸಿ ಈ ಘಟನೆ ನಡೆದಿದೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ.

Also Read  ಖಾಸಗಿ ಬಸ್ - ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ

error: Content is protected !!
Scroll to Top