ವಿಟ್ಲ: ರಿಕ್ಷಾದಲ್ಲಿ ಅಕ್ರಮ ದನದ ಮಾಂಸ ಸಾಗಾಟ ➤ ಪೊಲೀಸ್ ದಾಳಿ ವೇಳೆ ಆರೋಪಿ ಪರಾರಿ



(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 28. ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಘಟನೆ ಇಲ್ಲಿನ ಮೇಗಿನಪೇಟೆಯಲ್ಲಿ ಬುಧವಾರದಂದು ನಡೆದಿದೆ.







ಆಟೋ ರಿಕ್ಷಾದಲ್ಲಿ 25 ಕೆ.ಜಿ ಯಷ್ಟು ದನದ ಮಾಂಸ ಸಾಗಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ವಿಟ್ಲ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಹೆಚ್.ಇ. ನಾಗರಾಜ್ ಆದೇಶದ ಮೇರೆಗೆ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಸಂದೇಶ್ ಶೆಟ್ಟಿ ದಾಳಿ ನಡೆಸಿದ್ದು, ಈ ವೇಳೆ ರಿಕ್ಷಾ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.






error: Content is protected !!
Scroll to Top