ಬಂಟ್ವಾಳ: ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆ



(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 28. ಕೆಲಸಕ್ಕೆಂದು ಬೆಂಗಳೂರಿಗೆ ತೆರಳಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಬಂಟ್ವಾಳದಿಂದ ವರದಿಯಾಗಿದೆ.







ನಾಪತ್ತೆಯಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮ ಮದ್ದ ನಿವಾಸಿ ಅಬೂಬಕ್ಕರ್ ಎಂಬವರ ಮಗ ಮಹಮ್ಮದ್ ನಿಜಾಮ್ ಎಂದು ಗುರುತಿಸಲಾಗಿದೆ. ಎಸ್ಸ್ಸೆಸ್ಸೆಲ್ಸಿ ತನಕ ವಿದ್ಯಾಭ್ಯಾಸ ಮಾಡಿದ್ದ ಈತ, ಪ್ರಸ್ತುತ ಕೂಲಿ ಕೆಲಸಕ್ಕೆ ಹೋಗುತ್ತಿದ್ದ. ಇತ್ತೀಚೆಗೆ ತನ್ನ ದೇರಳಕಟ್ಟೆಯ ಗೆಳೆಯನೊಂದಿಗೆ ಕೆಲಸಕ್ಕೆಂದು ಬೆಂಗಳೂರಿಗೆ ತೆರಳಿದ್ದು, ಆ ಬಳಿಕ ಯಾವುದೇ ರೀತಿಯ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿರುವುದಾಗಿ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top