ಪೆರ್ನೆ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com. ಪುತ್ತೂರು,  ಡಿ. 28  ಉಪ್ಪಿನಂಗಡಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮಗುಚಿ ಬಿದ್ದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿ.28 ರಂದು ನಡೆದಿದೆ.

ಬಿ.ಸಿ. ರೋಡ್ ನಿಂದ ಹಾಸನ ಕಡೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದ ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಹತ್ತಿರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top