ನಾಳೆ (ಡಿ. 29) ರಾಜ್ಯಕ್ಕೆ ಗೃಹಸಚಿವ ಅಮಿತ್ ಶಾ ಭೇಟಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 28. ಕೇಂದ್ರ ಗೃಹಸಚಿವ ಅಮಿತ್ ಶಾ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಡಿ. 29ರಿಂದ 31ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದು, ಗುರುವಾರದಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ವಿಶೇಷ ವಿಮಾನದ ಮೂಲಕ ಡಿ. 29ರಂದು ಹೊಸದಿಲ್ಲಿಯಿಂದ ಕರ್ನಾಟಕ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ, ರಾತ್ರಿ 10 ಗಂಟೆಗೆ ಯಲಹಂಕದ ವಾಯುನೆಲೆಗೆ ಆಗಮಿಸಿ, ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೊಟೇಲ್‍ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಡಿ. 30ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12.15ರ ವರೆಗೆ ಹೊಟೇಲ್‍ನಲ್ಲಿ ಉಪಹಾರದೊಂದಿಗೆ ರಾಜ್ಯ ಬಿಜೆಪಿ ಪ್ರಮುಖ ನಾಯಕರನ್ನು ಭೇಟಿ ಮಾಡಿ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲಿರುವ ಅವರು, ಮಧ್ಯಾಹ್ನ 1.35ಕ್ಕೆ ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1.45ಕ್ಕೆ ಮಂಡ್ಯ ಸರಕಾರಿ ಬಾಲಕರ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಅಮಿತ್ ಶಾ ಭಾಷಣ ಮಾಡಲಿದ್ದಾರೆ. ಅನಂತರ, ಮಧ್ಯಾಹ್ನ 3.30ಕ್ಕೆ ಗೆಜ್ಜಲಗೆರೆಯಲ್ಲಿ ಸ್ಥಾಪಿಸಿರುವ ಮೆಗಾ ಡೈರಿಯನ್ನು ಉದ್ಘಾಟನೆ ಮಾಡಲಿದ್ದಾರೆ. ಸಂಜೆ 5.45ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಸಹಕಾರ ವಲಯದ ಸಮ್ಮೇಳನದಲ್ಲಿ ಭಾಗಿಯಾಗಿ, ಅಂದು ರಾತ್ರಿ 8 ರಿಂದ 9.30ರವರೆಗೆ ಬಿಜೆಪಿ ಪಕ್ಷದ ನಾಯಕರೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Also Read  ಜಿಂಕೆ ಚರ್ಮ ಮಾರಾಟ ಪ್ರಕರಣ ► ಇಬ್ಬರ ಬಂಧನ

error: Content is protected !!
Scroll to Top