(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 29. ಮಂಗಳೂರು ಕಾಟಿಪಳ್ಳ ನಿವಾಸಿ ಜಲೀಲ್ ಹತ್ಯೆಯನ್ನು ಖಂಡಿಸಿ ಮತ್ತು ಕೊಲೆಯ ಸೂತ್ರಧಾರಿಗಳನ್ನು ಬಂಧಿಸಿ ಯುಎಪಿಎ ಕಾಯ್ದೆಯನ್ವಯ ಪ್ರಕರಣ ದಾಖಲಿಸಲು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ ನೇತೃತ್ವದಲ್ಲಿ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ, ಸಮಿತಿ ಉಪಾಧ್ಯಕ್ಷರಾದ ಹನೀಫ್ ಪೂಂಜಾಲ್ಕಟ್ಟೆ, ಫಝಲ್ ರಹಮಾನ್, ನಿಸಾರ್ ಕುದ್ರಡ್ಕ, ಸಾಲಿ ಮದ್ದಡ್ಕ, ಅಝೀಝ್ ಝುಹರಿ, ಬ್ಲಾಕ್ ಸಮಿತಿ ಪದಾಧಿಕಾರಿಗಳು ಮತ್ತು ಪಂಚಾಯತ್ ಬೆಂಬಲಿತ ಸದಸ್ಯರು, ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು. ಕ್ಷೇತ್ರ ಕಾರ್ಯದರ್ಶಿ ನಿಝಾಮ್ ಗೇರುಕಟ್ಟೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿ, ರವೂಫ್ ಪುಂಜಾಲ್ಕಟ್ಟೆ ವಂದಿಸಿದರು.