ಚಾರ್ಮಾಡಿ ಘಾಟ್ ನಲ್ಲಿ ಕಾಡ್ಗಿಚ್ಚು ➤ ಅರಣ್ಯ ಪ್ರದೇಶ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com  ಚಿಕ್ಕಮಗಳೂರು, ಡಿ. 29.  ಅಗ್ನಿ ಅವಘಡ ದಿಂದಾಗಿ, ಸುಮಾರು 60 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್‌ ಸಮೀಪದ ಸೋಮನಕಾಡು ಪ್ರದೇಶದಲ್ಲಿ ವರದಿಯಾಗಿದೆ.

ಇದನ್ನು ಗಮನಿಸಿದ ಅರಣ್ಯ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ಸುಮಾರು 60 ಎಕರೆ ಅರಣ್ಯ ನಾಶವಾಗಿದ್ದು, ಬೆಂಕಿಯಿಂದ ಸರೀಸೃಪಗಳು, ಕೀಟಗಳು ಮತ್ತು ಪಕ್ಷಿಗಳು ಸಾವನ್ನಪ್ಪಿರುವ ಸಾಧ್ಯತೆಗಳಿವೆ ಎಂದಿದ್ದಾರೆ. ಚಿಕ್ಕಮಗಳೂರು ವಿಭಾಗದ ಡಿಸಿಎಫ್‌ಒ ಎನ್‌ಇ ಕ್ರಾಂತಿ ಅವರು ಪ್ರತಿಕ್ರಿಯೆ ನೀಡಿ, ಬೆಂಕಿ ಅವಘಡದಲ್ಲಿ ಕಿಡಿಗೇಡಿಗಳ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Also Read  ಸೀರೆ ಹಂಚಲು ಬಂದಿದ್ದ ಶಾಸಕರ ಬೆಂಬಲಿಗರನ್ನು ತರಾಟೆಗೆ ತೆಗೆದುಕೊಂಡ ಜನರು

 

 

error: Content is protected !!
Scroll to Top