ಸಹಕಾರಿ ಸಂಘದಿಂದ ವಂಚನೆ ಪ್ರಕರಣ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 29. ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದಿಂದ 100 ಕೋಟಿಗೂ ಮಿಕ್ಕಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಸಹಕಾರಿ ಸಂಘದ ಅಧ್ಯಕ್ಷ ಬಿ.ವಿ.ಲಕ್ಷ್ಮೀನಾರಾಯಣ ಅವರನ್ನು ಬ್ರಹ್ಮಾವರ ಸಮೀಪದ ಮಟಪಾಡಿಯಲ್ಲಿ ಉಡುಪಿ ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಕುರಿತು ವರದಿಯಾಗಿವೆ.

ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರು ಡಿ.19 ರಂದು ಸೊಸೈಟಿಯ ಕಚೇರಿಗೆ ಘೇರಾವ್ ಹಾಕಿದ್ದು, ಗ್ರಾಹಕರಿಗೆ 100 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Also Read  ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬೇಟೆ: ರಾಜ್ಯದ 8 ಕಡೆಗಳಲ್ಲಿ ದಾಳಿ

error: Content is protected !!
Scroll to Top