ಮಾಣಿ; ವಾಹನಗಳ ನಡುವೆ ಸರಣಿ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಾಣಿ, ಡಿ. 30. ಮೂರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯ ಪಳಿಕೆ ಎಂಬಲ್ಲಿ ನಡೆದಿದೆ.


ಮಾಣಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು, ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಬಳಿಕ ಅದರ ಹಿಂದಿನಿಂದ ಬರುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದು  ದುರ್ಘಟನೆ ಸಂಭವಿಸಿದೆನ್ನಲಾಗಿದೆ.

Scroll to Top