(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಇನ್ನೇನು ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ, ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿಯಲ್ಲಿ ತೊಡಗಿದೆ. ಇದೀಗ ರಾಜ್ಯ ಬಿಜೆಪಿ ಸರ್ಕಾರವು ಚುನಾವಣೆ ಹಿನ್ನೆಲೆ ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು, ಇಂಧನ ದರ ಇಳಿಕೆಗೆ ಮುಂದಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನೀಲ್ ಕುಮಾರ್, ಬೆಸ್ಕಾಂ ಮತ್ತು ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದಿದ್ದಾರೆ.