(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಡಿ. 30. ಹಾಡಹಗಲೇ ಯುವಕನೋರ್ವ ಅಸಭ್ಯ ರೀತಿಯಲ್ಲಿ ಬೈಕ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿಕೊಂಡು ಹೋಗಿರುವ ಘಟನೆ ಆಂದ್ರಪ್ರದೇಶದ ವಿಶಾಖಪಟ್ಟಣಂನ ಪ್ರಧಾನ ಮಂತ್ರಿ ರಸ್ತೆಯಲ್ಲಿ ನಡೆದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕ ಮತ್ತು ಯುವತಿಯನ್ನು ವಶಕ್ಕೆ ಪಡೆದು, ಅವರಿಬ್ಬರ ವಿರುದ್ಧ ಪ್ರಕರಣ ದಾಖಲಿಸಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.