(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಕಲ್ಲು ಎತ್ತಿ ಹಾಕಿ ಯುವಕನನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.
ಬಂಧಿತ ಆರೋಪಿಯನ್ನು ಸರೋಜ ಎಂದು ಗುರುತಿಸಲಾಗಿದೆ. ಆಕೆ ಮತ್ತು ಆಕೆಯ ಕುಟುಂಬಸ್ಥರು ಮಂಜುನಾಥ್ ಬಾಳಪ್ಪ ಎಂಬಾತನ ಮೇಲೆ ಕಲ್ಲು ಎತ್ತಿಹಾಕಿ ಕ್ರೂರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಪ್ಪ, ಅಕ್ಕಮಹಾದೇವಿ, ಮಂಜುನಾಥ್, ಕಿರಣ್, ಚೆನ್ನಪ್ಪ ಹಾಗೂ ಕಾಶಿನಾಥ್ ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಆದರೆ ಪ್ರಮುಖ ಆರೋಪಿ ಸರೋಜ ತಲೆಮರೆಸಿಕೊಂಡಿದ್ದಳು. ಆಕೆಯೇ ಕೊಲೆ ಮಾಡಿರುವ ದೃಶ್ಯವು ಸಿಸಿ ಕ್ಯಾಮರದಲ್ಲಿ ಸೆರೆಯಾಗಿತ್ತು. ಪೊಲೀಸರ ತನಿಖೆಯ ವೇಳೆ ಮಾತಾನಾಡೋ ನೆಪದಲ್ಲಿ ಕರೆಸಿ ಕೊಲೆ ಮಾಡಿರುವುದಾಗಿ ಬಾಯಿಬಿಟ್ಟಿದ್ದಾಳೆ ಎನ್ನಲಾಗಿದೆ.