ಹೊಸ ವರ್ಷಾಚರಣೆಯ ಹಿನ್ನೆಲೆ ಸಿಸಿಬಿ ಪೊಲೀಸರ ಕಾರ್ಯಾಚರಣೆ ➤ 6.30 ಕೊಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

crime, arrest, suspected

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಭರ್ಜರಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಬರೋಬ್ಬರಿ 6.30 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಕುರಿತು ಬೆಂಗಳೂರಿನಲ್ಲಿ ವರದಿಯಾಗಿದೆ.

ಹೊಸವರ್ಷಾಚರಣೆಯ ಹಿನ್ನೆಲೆ ಡ್ರಗ್ಸ್ ಸಪ್ಲ್ಗೈ ಆಗುತ್ತಿರುವ ಮಾಹಿತಿಯಂತೆ ಕಾರ್ಯಾಚರಣೆಗಿಳಿದ ಸಿಸಿಬಿ ಆಧಿಕಾರಿಗಳು ಎಂಡಿಎಂಎ, ಚರಸ್, ಗಾಂಜಾ ಸೇರಿ ವಿವಿಧ ಮಾದರಿಯ ಸುಮಾರು 6.30 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ.

Scroll to Top