ಕಾರು- ಬೈಕ್ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರ ಹಾಗೂ ಮಗು ಗಂಭೀರ

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 30. ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಕ್ರಾಸ್ ಬಳಿ ಶುಕ್ರವಾರದಂದು ಬೆಳಗ್ಗೆ ಸಂಭವಿಸಿದೆ.

ಗಾಯಗೊಂಡ ಬೈಕ್ ಸವಾರನನ್ನು ಅಂಡಾರು ಗ್ರಾಮದ ಕೊಂದಲ್ಕೆ ನಿವಾಸಿ ನಿತ್ಯಾನಂದ ಕುಲಾಲ್( 32) ಹಾಗೂ ಅವರೊಂದಿಗೆ ಇದ್ದ ಮೂರು ವರ್ಷದ ಮಗು ಕೂಡ ಗಂಭೀರ ಗಾಯಗೊಂಡಿದೆ. ಗಾಯಾಳುಗಳನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿತ್ಯಾನಂದೆವರು ತನ್ನ ಸಹೋದರಿಯ ಮಗುವನ್ನು ಬೈಕ್‌ ನಲ್ಲಿ ಕೂರಿಸಿಕೊಂಡು ಕಾರ್ಕಳದಿಂದ ಅಂಡಾರು ಕಡೆಗೆ ಹೋಗುತ್ತಿದ್ದ ವೇಳೆ ಹೆಬ್ರಿ ಕಡೆಯಿಂದ ಬರುತ್ತಿದ್ದ ಮಾರುತಿ ಬಲೆನೊ ಕಾರು, ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಬಲಗಡೆ ತಿರುಗಿಸಿದಾಗ ಈ ದುರ್ಘಟನೆ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಬೈಕ್ ನುಜ್ಜುಗುಜ್ಜಾಗಿದೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group