ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಢಿಕ್ಕಿ ಹೊಡೆದ ಬಸ್ ➤ 9 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಗುಜರಾತ್, ಡಿ. 31. ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾದ ಪರಿಣಾಮ 9 ಮಂದಿ ದಾರುಣ ಅಂತ್ಯ ಕಂಡ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ.

28 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ 11 ಮಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದವರು ಸೂರತ್ ನಲ್ಲಿನ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಾಸ್ ಆಗುತ್ತಿದ್ದ ವೇಳೆ ಬಸ್ಸಿನ ಚಾಲಕನಿಗೆ ಹೃದಯಾಘಾತ ಸಂಭವಿಸಿ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

 

Scroll to Top