ಜ. 03ಕ್ಕೆ ಕೆಪಿಟಿಸಿಎಲ್ ಪರೀಕ್ಷೆಗಳ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್​ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇರ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ 3ರಂದು ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

 

ಕೆಪಿಟಿಸಿಎಲ್ ನಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ನಡೆದ ಪರೀಕ್ಷೆಗಳ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಮತ್ತು ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್​ ಕುಮಾರ್ ಕಳೆದ ವಾರ ಬೆಳಗಾವಿಯ ವಿಧಾನಸಭೆ ಕಲಾಪದಲ್ಲಿ ತಿಳಿಸಿದ್ದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಪರೀಕ್ಷೆಗಳನ್ನು 5 ತಿಂಗಳ ಹಿಂದೆ ನಡೆಸಲಾಗಿತ್ತು.

Scroll to Top