ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ ಪ್ರಕರಣ ➤ ಚಾಲಕನ ವಿರುದ್ಧ FIR

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 31. ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಚಾಲಕನ ಮೇಲೆ ಎಫ್ಐಆರ್ ದಾಖಲಿಕೊಂಡಿದ್ದಾರೆ.

ಡಿ. 27ರಂದು ಪ್ರಹ್ಲಾದ್ ಮೋದಿ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಕಟಕೋಳದಲ್ಲಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದರು. ಈ ಅಪಘಾತಕ್ಕೆ ಸಂಬಂಧಿಸಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಕಾರಣವೆಂದು ಚಾಲಕ ಎನ್.ಸತ್ಯನಾರಾಯಣ ವಿರುದ್ಧ ಐಪಿಸಿ ಕಲಂ 279 (ಅತಿಯಾದ ವೇಗ), 337 (ನಿರ್ಲಕ್ಷ್ಯದ ಚಾಲನೆ) ಅಡಿಯಲ್ಲಿ  ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

Also Read  ಕೆಎಸ್ಆರ್ಟಿಸಿ ಬಸ್ -ಬೈಕ್ ಡಿಕ್ಕಿ ➤ ಇಬ್ಬರು ಸ್ಥಳದಲ್ಲೇ ದುರ್ಮರಣ..!

error: Content is protected !!
Scroll to Top