ನೋಟ್ ಬ್ಯಾನ್ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್….!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ಒಂದು ಸಾವಿರ ರೂ. ಮತ್ತು 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿ 2016ರಲ್ಲಿ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳಿಗೆ ಸಂಬಂಧಿಸಿ, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್‌.ಎ. ನಜೀರ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಸೋಮವಾರದಂದು ತೀರ್ಪು ಪ್ರಕಟಿಸಿದೆ.

 

ಕೇಂದ್ರ ಸರ್ಕಾರ ಮಾಡಿದ್ದ ನೋಟ್ ಬ್ಯಾನ್ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ ಎಂದಿದೆ. ನೋಟು ಬದಲಾಯಿಸಲು ನೀಡಿದ ಕಾಲಾವಕಾಶ ಸರಿಯಾಗಿದೆ. ನೋಟು ಅಮಾನ್ಯಗೊಳಿಸಿದ ಸಂದರ್ಭ ಆರ್ ಬಿಐ, ಕೇಂದ್ರಸರ್ಕಾರದ ಜತೆ ಚರ್ಚೆ ನಡೆಸಿತ್ತು. ಇಂತಹ ಕ್ರಮವನ್ನು ತರಲು ಸಮಂಜಸವಾದ ಸಂಬಂಧವಿತ್ತು ಎಂದು ಹೇಳಿದೆ.

Also Read  ಈ 8 ರಾಶಿಯವರಿಗೆ ಶುಭಫಲ, ಕಂಕಣ ಭಾಗ್ಯ, ದಾಂಪತ್ಯದಲ್ಲಿನ ಕಲಹ, ವ್ಯಾಪಾರ ಅಭಿವೃದ್ಧಿ ಸುಧಾರಿಸುತ್ತದೆ

error: Content is protected !!
Scroll to Top