ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ ➤ ಮುಂದುವರಿದ ಚಿಕಿತ್ಸೆ                              

(ನ್ಯೂಸ್ ಕಡಬ) newskadaba.com ವಿಜಯಪುರ, ಜ. 02. ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಆಶ್ರಮದತ್ತ ಆಗಮಿಸುತ್ತಿದ್ದು, ಈ ಹಿನ್ನೆಲೆ ಅಶ್ರಮದಲ್ಲಿ ಅನ್ನದಾಸೋಹಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಶ್ರೀಗಳ ಆರೋಗ್ಯ ಕುರಿತು ಹೇಳಿಕೆ ನೀಡಿರುವ ಮಾಜಿ ಸಚಿವ ಎಂ.ಬಿ.ಪಾಟೀಲ ಅವರು, ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

ಈ ನಡುವೆ ಆಶ್ರಮಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದು, ಶ್ರೀಗಳ ಆರೋಗ್ಯವನ್ನು ವಿಚಾರಿಸಿದರು ಎನ್ನಲಾಗಿದೆ. ಇದಕ್ಕೂ ಮುನ್ನ ಎಂ.ಬಿ.ಪಾಟೀಲ, ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ನಿಜಗುಣಾನಂದ ಸ್ವಾಮೀಜಿ, ಸಿಂದನೂರಿನ ಮಾಜಿ ಶಾಸಕ ಹಂಪನ ಗೌಡ ಮತ್ತು ಬಾದರ್ಲಿ ಶ್ರೀಗಳು ದರ್ಶನಕ್ಕೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಸಿದ್ದೇಶ್ವರ ಶ್ರೀಗಳ ಆರೋಗ್ಯದ ಬಗ್ಗೆ ಆತಂಕಗೊಂಡಿರುವ ಸಾವಿರಾರು ಭಕ್ತರು, ಅಭಿಮಾನಿಗಳು ಜ್ಞಾನಯೋಗಾಶ್ರಮದತ್ತ ಧಾವಿಸುತ್ತಿದ್ದಾರೆ. ಈಗಾಗಲೇ ಸಾವಿರಕ್ಕೂ ಹೆಚ್ಚು ಮಂದಿ ಆಶ್ರಮದ ಆವರಣದಲ್ಲಿಯೇ ತಂಗಿದ್ದಾರೆ. ಅನ್ಯರಾಜ್ಯದಿಂದಲೂ ಜನರು ಬರುತ್ತಿದ್ದಾರೆ ಎಂದು ತಿಳಿದುಬಂದಿದೆ.

Also Read  'ಅಪ್ಪು' ಅಗಲಿಕೆ ಬೆನ್ನಲ್ಲೇ ಬ್ಲೇಡ್ ನಲ್ಲಿ ಅಪ್ಪು ಎಂದು ಕುಯ್ದುಕೊಂಡು ಅಸ್ವಸ್ಥಳಾದ ವಿದ್ಯಾರ್ಥಿನಿ..! ➤ "ಐ ಲವ್ ಯೂ, ಐ ವಾಂಟ್ ಯೂ ಅಪ್ಪು" ಎಂದು ರಕ್ತದಲ್ಲೇ ಬರೆದುಕೊಂಡ ಅಭಿಮಾನಿ

error: Content is protected !!
Scroll to Top