(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.06. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಸ್.ಸಿ.ದ್ವಾರಕನಾಥ್ ಅವರು ಶ್ರೀರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಖಾಸಗಿ ದೂರು ದಾಖಲಾಗಿದೆ.
ಮಂಗಳೂರಿನ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದ್ವಾರಕನಾಥ್ ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದರಿಂದ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ಉಂಟಾಗಿದೆ. ಶ್ರೀ ರಾಮ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ದ್ವಾರಕನಾಥ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಲ್ಲಡ್ಕದ ಗಣೇಶ್ ಶೆಟ್ಟಿ ಎಂಬವರು ಪೊಲೀಸರಿಗೆ ನೀಡಿರುವ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.