ಬಾಂಬ್ ಸ್ಫೋಟ ➤ ನಾಲ್ವರು ಮೃತ್ಯು, ಹಲವರಿಗೆ ಗಾಯ



(ನ್ಯೂಸ್ ಕಡಬ) newskadaba.com ಜಮ್ಮು- ಕಾಶ್ಮೀರ, ಜ. 02. ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ನಾಲ್ವರು ನಾಗರಿಕರು ಮೃತಪಟ್ಟ ಹಲವರು ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಹಳ್ಳಿಯಲ್ಲಿ ವರದಿಯಾಗಿದೆ.





ಮೃತಪಟ್ಟಿರುವವರನ್ನು ಸತೀಶ್ ಕುಮಾರ್ (45), ದೀಪಕ್ ಕುಮಾರ್ (23), ಪ್ರೀತಮ್ ಲಾಲ್ (57) ಮತ್ತು ಶಿಶುಪಾಲ್ (32) ಹಾಗೂ ಗಾಯಗೊಂಡವರನ್ನು ಪವನ್ ಕುಮಾರ್ (38), ರೋಹಿತ್ ಪಂಡಿತ್ (27), ಸರೋಜ್ ಬಾಲಾ (35), ರಿದಮ್ ಶರ್ಮಾ (17) ಮತ್ತು ಪವನ್ ಕುಮಾರ್ (32) ಎಂದು ಗುರುತಿಸಲಾಗಿದೆ. ಗಾಯಾಳುಗೊಂಡವರಿಗೆ ವಿಶೇಷ ಚಿಕಿತ್ಸೆ ನೀಡಲು ಜಮ್ಮು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.






error: Content is protected !!
Scroll to Top