ತಣ್ಣೀರುಬಾವಿ ಲಾಠಿ ಚಾರ್ಜ್ ಪ್ರಕರಣ..!!! ➤ ಪೊಲೀಸ್ ಕಾನ್ ಸ್ಟೇಬಲ್ ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.03. ತಣ್ಣೀರಬಾವಿ ಬೀಚ್ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿ ವಿದ್ಯಾರ್ಥಿ ಮೇಲೆ ಲಾಠಿ ಏಟು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ಸುನೀಲ್ ಎಂಬವರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.


ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಣ್ಣೀರಬಾವಿ ಘಟನೆಗೆ ಸಂಬಂಧಪಟ್ಟಂತೆ ಸಿಬ್ಬಂದಿ ಸುನೀಲ್ ಅವರನ್ನು ಅಮಾನತುಗೊಳಿಸಲಾಗಿದ್ದು, ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ. ಘಟನೆ ಕುರಿತು ಯಾರಿಂದಲೂ ಪೋಷಕರು ಅಥವಾ ಬಾಲಕನಿಂದಾಗಲಿ ಯಾವುದೇ ದೂರು ಬಂದಿಲ್ಲ ಎಂದು ತಿಳಿಸಿದ್ದಾರೆ.

Also Read  ರಾಷ್ಟ್ರೀಯ ಕುಸ್ತಿ ➤ ರಾಜ್ಯಕ್ಕೆ ಬೆಳ್ಳಿ ಗರಿ!

ವಿಕೇಂಡ್ ಮತ್ತು ಹೊಸ ವರ್ಷವಾದ್ದರಿಂದ ತಣ್ಣೀರಭಾವಿ ಬೀಚ್ಗೆ ಭೇಟಿ ನೀಡಿವವರ ಸಂಖ್ಯೆ ಹೆಚ್ಚಿದ್ದು, ಈ ವೇಳೆ ಅಲ್ಲಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿಯ ವಿದ್ಯಾರ್ಥಿ, ಪಿಯು ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಬೀಸಿದ್ದರು ಎಂದು ವರದಿ ತಿಳಿಸಿದೆ.

error: Content is protected !!
Scroll to Top