ಕಾರು ಢಿಕ್ಕಿ ➤ ಕೋಮಾಗೆ ಜಾರಿದ ಓರ್ವ ವಿದ್ಯಾರ್ಥಿ



 (ನ್ಯೂಸ್ ಕಡಬ) newskadaba.com ನವದೆಹಲಿ, ಜ.04. ಅತಿ ವೇಗವಾಗಿ ಬಂದ ಕಾರು ಮೂವರು ಬಿ.ಟೆಕ್ ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇನ್ನೊರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾದ ಘಟನೆ ಗ್ರೇಟರ್ ನೋಯ್ಡಾದ ಏರಡನೇ ಏರಿಯಾದಲ್ಲಿ ಸಂಭವಿಸಿದೆ.





ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಸ್ವೀಟಿ ಕುಮಾರಿ ಎಂದು ಗುರುತಿಸಲಾಗಿದೆ. ಆಕೆಯ ತಲೆಯ ಮತ್ತು ಕಾಲುಗಳಿಗೆ ಜೋರಾಗಿ  ಪೆಟ್ಟು ಬಿದ್ದಿದ್ದು, ಕೋಮಾಗೆ ಜಾರಿದ್ದಾಳೆ.ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ. ಧನ ಸಹಾಯಕ್ಕಾಗಿ ಸ್ವೀಟಿ ಕುಮಾರಿಯ ಸಹೋದರ ಸಂತೋಷ್ ಕುಮಾರ್ ರವರು ಸಾಮಾಜಿಕ ಮಾಧ್ಯಮಗಳ ಮೂಲಕ ಕೋರಿ ಕೊಂಡಿದ್ದಾರೆ ಎನ್ನಲಾಗಿದೆ.






error: Content is protected !!
Scroll to Top