(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜ. 05. ಯುವಕನಿಗೆ ಚೂರಿಯಿಂದ ಇರಿದಿರುವ ಕುರಿತು ಹುಬ್ಬಳ್ಳಿಯಲ್ಲಿ ವರದಿಯಾಗಿದೆ. ಚೂರಿಯಿಂದ ಇರಿತಕ್ಕೊಳಗಾದವರನ್ನು ತೌಸೀಫ್ ಸಗೀರ್ ಅಹ್ಮದ್ ಮುಲ್ಲಾ (32) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಆತನನ್ನು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ವಿಶಾಲ್ ಹಾಗೂ ಪ್ರಮೋದ್ ಎಂಬವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಕೃತ್ಯ ನಡೆದಿದೆ ಎಂದು ವರದಿಯಾಗಿದೆ.














