ಪ್ರವಾಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ➤ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ) newskadaba.com, ಮೈಸೂರು ಜ. 06. ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್‌ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.

 

ಗುಜರಾತ್ ನಿಂದ ಐವತ್ತು ಮಂದಿಯನ್ನು ಹೊತ್ತುಕೊಂಡು ಬಂದಿದ್ದ ಬಸ್ ಚಾಮುಂಡಿ ಬೆಟ್ಟಕ್ಕೆಸಾಗುತ್ತಿದ್ದ ವೇಳೆ ಬಸ್‌ನಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಬಸ್ ಚಾಲಕ ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿ, ಕೂಡಲೇ ಬೆಂಕಿಯ ಸಂಪರ್ಕದ ವೈರ್ ಗಳನ್ನು ಕತ್ತರಿಸಿದ್ದಾರೆ. ಇದೀಗ ಚಾಲಕನ ಸಮಯಪ್ರಜ್ಞೆಯಿಂದಾಗಿ 50 ಮಂದಿಯ ಜೀವ ಉಳಿಸಿದಂತಾಗಿದೆ.

Scroll to Top