ಬೆಳ್ತಂಗಡಿ: ಚಿರತೆ ದಾಳಿಗೆ ಜಾನುವಾರು ಬಲಿ ➤ ಬೋನ್ ಅಳವಡಿಸಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 06. ಚಿರತೆ ದಾಳಿಗೆ ದನವೊಂದು ಬಲಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕುದ್ಯಾರು ಗ್ರಾಮದಲ್ಲಿ ಸಂಭವಿಸಿದೆ.

ಕುದ್ಯಾಡಿ ಗ್ರಾಮದ ಕೆಳಗಿನಬೆಟ್ಟು ಮನೆಯ ಶೀನ ಪೂಜಾರಿ ಎಂಬವರು ದನವನ್ನು ತೋಟದಲ್ಲಿ ಮೇಯಲು ಬಿಟ್ಟಿದ್ದ ವೇಳೆ, ಚಿರತೆಯೊಂದು ಏಕಾಏಕಿ ದಾಳಿ ಮಾಡಿದೆ ಎನ್ನಲಾಗಿದೆ. ಚಿರತೆ ದಾಳಿಗೆ ದನ ಮೃತಪಟ್ಟಿದ್ದು, ಕೂಡಲೇ ಸ್ಥಳೀಯ ಪಂಚಾಯತ್ ಸದಸ್ಯರೊಬ್ಬರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು ಅವರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

 

Scroll to Top