ಜ. 21ರಂದು ಮಾಣಿಲ ಗ್ರಾಮದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ಇದೇ ತಿಂಗಳ ಮೂರನೇ ಶನಿವಾರ (ಜ. 21ರ) ಬೆಳಗ್ಗೆ 11 ಗಂಟೆಯಿಂದ ಬಂಟ್ವಾಳ ತಾಲೂಕಿನ ಮಾಣಿಲ ಗ್ರಾಮದ ಮುರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಅಲ್ಲಿನ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವೊಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಆದಕಾರಣ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಅಲ್ಲಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಪುತ್ತೂರಿನ ಯುವಕ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

error: Content is protected !!
Scroll to Top