ಆಟೋಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು , ಮೂವರಿಗೆ ಗಾಯ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.07.   ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಹಾಗೂ ಮೂವರು ಗಾಯಗೊಂಡ ಘಟನೆ ಬೆಂಗಳೂರಿನ ಕೆ.ಆರ್.ಪುರಂನ  ಬಳಿ ವರದಿಯಾಗಿದೆ. ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮೃತರನ್ನು ಫಾಜಿಲಾ ಮತ್ತು ತಸೀನಾ ಹಾಗೂ ಗಾಯಗೊಂಡವರನ್ನು ತಸೀನಾ ಮತ್ತು ಅವರ ಪತಿ ಖಲೀದ್  ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ತಿಳಿದು ಬಂದಿದೆ. ಈ ಬಗ್ಗೆ ಕೆ.ಆರ್. ಪುರಂ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಾಲಕನಿಗಾಗಿ ಶೋಧ ನಡೆಸಿದ್ದಾರೆ ಎನ್ನಲಾಗಿದೆ.

Scroll to Top