(ನ್ಯೂಸ್ ಕಡಬ)newskadaba.com ಜ.07. ಹಿಂದಿನ ಕಾಲದಲ್ಲಿ ಹೆಣ್ಣು ಮಕ್ಕಳ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗುತ್ತಿತ್ತು. ಅದಕ್ಕೆ ಕಾರಣ ಜನರು ಎದುರಿಸುತ್ತಿದ್ದ ಅನೇಕ ಸಮಸ್ಯೆಗಳು. ಅದರಲ್ಲೂ ಮುಖ್ಯವಾದುದು ಎಂದರೆ ಆರ್ಥಿಕ ಸಮಸ್ಯೆ. ಹೀಗಾಗಿ ಖರ್ಚು ಮಾಡಲು ಸಾಕಷ್ಟು ಹಣವಿಲ್ಲ ಎಂದು ಕುಟುಂಬದ ಗಂಡು ಮಗುವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ವಿದ್ಯಾಭ್ಯಾಸ ನೀಡಲಾಗುತ್ತಿತ್ತು.
ಆದರೆ ಈಗ ಸಮಾಜದಲ್ಲಿನ ಈ ಸಮಸ್ಯೆಗಳನ್ನು ಹೋಗಲಾಡಿಸಲು ಸರ್ಕಾರವು ಅನೇಕ ಯೋಜನೆಗಳನ್ನು ಪ್ರಾರಂಭಿಸಿದೆ. ಅದರಲ್ಲಿ ಒಂದು ಲಾಡ್ಲಿ ಲಕ್ಷ್ಮಿ ಯೋಜನೆ ಎನ್ನಲಾಗಿದೆ. ಈ ಯೋಜನೆಯಡಿಯಲ್ಲಿ, 12 ನೇ ತರಗತಿಗೆ ಪ್ರವೇಶ ಪಡೆಯುವ ಅರ್ಹ ಹುಡುಗಿಯರಿಗೆ 6 ಸಾವಿರ ರೂಪಾಯಿಗಳನ್ನು ನೀಡಲಾಗುತ್ತದೆ. ಈ ಹಣವನ್ನು ಹೇಗೆ ಪಡೆಯಬಹುದು ಎಂಬುದನ್ನು ಈ ವರದಿಯಲ್ಲಿ ತಿಳಿಸಲಾಗಿದೆ.