ಮಂಗಳೂರು: ಸೀಮೆಎಣ್ಣೆ ಸಮಸ್ಯೆ 2 ದಿನದಲ್ಲಿ ಪರಿಹಾರ..! ➤  ಸಂಸದ ನಳಿನ್‌ ಕುಮಾರ್‌ ಕಟೀಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.08. ಮೀನುಗಾರರಿಗೆ ನೀಡಲಾಗುವ ಸಬ್ಸಿಡಿ ಸೀಮೆಎಣ್ಣೆ ವಿತರಣೆ ಸಮಸ್ಯೆಯನ್ನು ಇನ್ನೆರಡು ದಿನಗಳಲ್ಲಿ ಪರಿಹರಿಸಲಾಗುವುದು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರ ಎನ್ನಲಾಗಿದೆ. ನಗರದ ಕೋಸ್ಟ್‌ ಗಾರ್ಡ್‌ ಪ್ರಧಾನ ಕಚೇರಿಯಲ್ಲಿ ಮೀನುಗಾರರ ಮುಖಂಡರ ಜತೆ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಎಂದು ತಿಳಿದುಬಂದಿದೆ.

ಸಬ್ಸಿಡಿ ಸೀಮೆಎಣ್ಣೆ ಪೂರೈಕೆ ಸ್ಥಗಿತವಾಗಿರುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಲಾಗಿದೆ. ಎರಡು ದಿನಗಳಲ್ಲಿ ಸರ್ಕಾರದ ಕಡೆಯಿಂದ ಸಮಸ್ಯೆ ಬಗೆಹರಿಸಲಾಗುವುದು. ಅದೇ ರೀತಿ ಸಬ್ಸಿಡಿ ಡೀಸೆಲ್‌ ಪ್ರಮಾಣ ಹೆಚ್ಚಿಸುವ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ ಸಚಿವ ಎಸ್‌.ಅಂಗಾರ, ಮೀನುಗಾರಿಕೆ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ ಜತೆ ಚರ್ಚಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿದಿದೆ ಎಂದು ಅವರು ಹೇಳಿದರು ಎನ್ನಲಾಗಿದೆ.

Also Read  ವಿಡಿಯೋ ಲೈಕ್ ಮಾಡಿ 5 ಲಕ್ಷ ರೂ. ಕಳೆದುಕೊಂಡ ಭೂಪ..!

 

error: Content is protected !!
Scroll to Top