ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤  ಯುವಕನ ವಿರುದ್ಧ ದೂರು ದಾಖಲು..!!

(ನ್ಯೂಸ್ ಕಡಬ) newskadaba.com ಪುತ್ತೂರು, ಜ.08. ವಿದ್ಯಾರ್ಥಿನಿಯಾಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಮತ್ತು ಬೆದರಿಕೆಯೊಡ್ಡಿರುವ ಆರೋಪದಲ್ಲಿ ಯುವಕನೊಬ್ಬನ ವಿರುದ್ಧ ಸಂಪ್ಯ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಮತ್ತು ಬೆದರಿಕೆಯ ಪ್ರತ್ಯೇಕ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಆರೋಪಿಯನ್ನು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ನಿತೀಶ್‌ ರೈ ಎಂದು ತಿಳಿದುಬಂದಿದೆ. ಈತ, ಬಾಲಕಿಯೊಬ್ಬಳನ್ನು ಪ್ರೀತಿ ಮಾಡುವಂತೆ ಒತ್ತಾಯಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದು, ಪದೇ ಪದೇ ಆಕೆಗೆ ಮೊಬೈಲ್‌ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದಲ್ಲದೆ,  ಬ್ಲಾಕ್‌ಮೇಲ್‌ ಮಾಡಿದ್ದಾನೆ, ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ. ಕಿರುಕುಳ ನೀಡಿದ ಸಂದರ್ಭದಲ್ಲಿ ಅಪ್ರಾಪ್ತೆಯಾಗಿದ್ದ ಬಾಲಕಿ ಇದೀಗ ಪ್ರಾಪ್ತ ವಯಸ್ಸಿಗೆ ಬಂದ ಬಳಿಕ ತಡವಾಗಿ ದೂರು ನೀಡಿದ್ದಾರೆ. ಪೊಲೀಸರು ಆಕೆಯ ದೂರಿನಂತೆ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಉಪ್ಪಿನಂಗಡಿ: ವಿವಾಹಿತ ಮಹಿಳೆಯ ಬರ್ಬರ ಕೊಲೆ ➤ ಪತಿಯಿಂದಲೇ ಕೊಲೆ ಶಂಕೆ

 

error: Content is protected !!