ಸಹೋದ್ಯೋಗಿಯ ಕೊಲೆಗೆ ಸುಪಾರಿ ನೀಡಿದ ಆರೋಪ ► ಪತ್ರಕರ್ತ ರವಿ ಬೆಳಗೆರೆಗೆ ಜೈಲು



(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.11. ಸಹೋದ್ಯೋಗಿಯ ಕೊಲೆಗೆ ಸುಪಾರಿ ನೀಡಿದ ಆರೋಪದಲ್ಲಿ ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.





ರವಿ ಬೆಳಗೆರೆ ಅವರನ್ನು ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಇಂದು ಹಾಜರುಪಡಿಸಿದಾಗ ನ್ಯಾಯಾಧೀಶ ಜಗದೀಶ್ ಅವರು ರವಿಬೆಳೆಗೆರೆಗೆ ಡಿ.23 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ‌.






ರವಿ ಬೆಳಗೆರೆಯವರ ವಕೀಲರ ತಂಡವು ಬುಧವಾರದಂದು ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ನಿರೀಕ್ಷೆ ಇದೆ.

error: Content is protected !!
Scroll to Top