ಉಡುಪಿ: ಎರಡು ಪ್ರತ್ಯೇಕ ಗಾಂಜಾ ಪ್ರಕರಣ..! ➤ ಇಬ್ಬರು ಆರೋಪಿಗಳು ಅರೆಸ್ಟ್

crime, arrest, suspected

(ನ್ಯೂಸ್ ಕಡಬ)newskadaba.com  ಮಣಿಪಾಲ, ಜ.09. ಗಾಂಜಾ ಸೇವನೆಯ ಎರಡು ಪ್ರಕರಣದಲ್ಲಿ ಇಬ್ಬರು ಯುವಕರನ್ನು ಉಡುಪಿ ಪಬ್ ಒಂದರ ಬಳಿ ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ.

ಪ್ರಕರಣವೊಂದರಲ್ಲಿ ಉಡುಪಿಯ ಚಿಟ್ಟಾಡಿಯ ಫರೇಶ್(20) ಹಾಗೂ ಮತ್ತೊಂದು ಪ್ರಕರಣದಲ್ಲಿ ಉಡುಪಿ ಒಳಕಾಡುವಿನ ಪ್ರತೀಕ್(22) ಎಂಬವರ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ವೈದ್ಯಕೀಯ ವರದಿಯಲ್ಲಿ ಗಾಂಜಾ ಸೇವನೆ ಧೃಢವಾಗಿದೆ ಎಂದು ವರದಿ ತಿಳಿಸಿದೆ.

 

Scroll to Top