ಮಂಗಳೂರು: ಶತಮಾನೋತ್ಸವ ಹೊಸ್ತಿಲಲ್ಲಿ ಕರ್ಣಾಟಕ ಬ್ಯಾಂಕ್‌

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.10. ಪ್ರತಿಷ್ಠಿತ ಕರ್ಣಾಟಕ ಬ್ಯಾಂಕಿನ ಪ್ರಧಾನ ಕಚೇರಿ ಮಂಗಳೂರಿನಲ್ಲಿ ಬ್ಯಾಂಕಿನ ಎಲ್ಲ ಪ್ರಾದೇಶಿಕ ಮುಖ್ಯಸ್ಥರು, ವಿವಿಧ ಇಲಾಖೆಯ ಮುಖ್ಯಸ್ಥರು, ಉನ್ನತ ಅಧಿಕಾರಿಗಳನ್ನು ಒಳಗೊಂಡು ಬ್ಯಾಂಕಿನ ಪ್ರಾದೇಶಿಕ ಕಚೇರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಈ ಸಂದರ್ಭ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಬ್ಯಾಂಕ್‌ನ ಎಂಡಿ ಮತ್ತು ಸಿಇಒ ಮಹಾಬಲೇಶ್ವರ ಎಂ.ಎಸ್‌., ಸತತವಾಗಿ ಉತ್ತಮ ಫಲಿತಾಂಶಗಳನ್ನು ಸಾಧಿಸುತ್ತಿರುವ ಕರ್ಣಾಟಕ ಬ್ಯಾಂಕ್‌ ಶತಮಾನೋತ್ಸವದ ಸಂಭ್ರಮಕ್ಕೆ ಸಜ್ಜಾಗಿ ನಿಂತಿದೆ. ಸಾಮಾಜಿಕ ಕಳಕಳಿಗೆ ಬದ್ಧವಾಗಿ ಸುದೃಢ ಆರ್ಥಿಕ ವ್ಯವಹಾರ ಸಂಸ್ಥೆಯಾಗಿ ಬ್ಯಾಂಕ್‌ ಹೆಸರು ಗಳಿಸಬೇಕೆಂಬ ಪೂರ್ವಜರ ದೂರದೃಷ್ಟಿಗೆ ಅನುಗುಣವಾಗಿ ಇಂದು ಬ್ಯಾಂಕ್‌ ಬೆಳೆದು ನಿಂತಿದೆ. ಇದು ನಾವು ಬ್ಯಾಂಕಿನ ಸಂಸ್ಥಾಪಕರಿಗೆ ಸಲ್ಲಿಸುವ ದೊಡ್ಡ ಗೌರವ ಎಂದರು ಎನ್ನಲಾಗಿದೆ.

Also Read  ಉಡುಪಿ: ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್‌ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

 

 

error: Content is protected !!
Scroll to Top