ಬೆಳ್ತಂಗಡಿ:  ಯುವಕನೋರ್ವನ ಮೃತದೇಹ ಪತ್ತೆ…!           



(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಜ.11. ಯುವಕನೊರ್ವನ ಮೃತದೇಹ ನದಿಯ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ.







ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮವತಿ ನದಿ ಸಂಗಾತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಲಾಯಿಲ ಗ್ರಾಮದ ಅಯೋಧ್ಯನಗರದ ನಿವಾಸಿ ಕಿರಣ್ (27) ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಶವ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.






 

 

error: Content is protected !!
Scroll to Top