ಜಿಲ್ಲಾ ಮಟ್ಟದ ‘ಸ್ಥಳದಲ್ಲೇ ಮಾದರಿ ತಯಾರಿ’ ಸ್ಪರ್ಧೆ ► ರಾಮಕುಂಜೇಶ್ವರ ಪ್ರೌಢಶಾಲೆಯ ಶಿಕ್ಷಕ ವೆಂಕಟೇಶ ದಾಮ್ಲೆ ರಾಜ್ಯ ಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.13. ಜಿಲ್ಲಾಮಟ್ಟದ “ಸ್ಥಳದಲ್ಲೇ ಮಾದರಿ ತಯಾರಿ” ಸ್ಪರ್ಧೆಯಲ್ಲಿ ಹೈಸ್ಕೂಲು ವಿಭಾಗದಿಂದ ಶ್ರೀ ರಾಮಕುಂಜೇಶ್ವರ  ಪ್ರೌಢಶಾಲೆಯ (ಕನ್ನಡ ಮಾಧ್ಯಮ) ಗಣಿತ ಶಿಕ್ಷಕರಾದ ಶ್ರೀ ವೆಂಕಟೇಶ ದಾಮ್ಲೆಯವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ದ.ಕ. ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಪ್ಠಾನ ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ – ಇವುಗಳ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ “ಸ್ಥಳದಲ್ಲೇ ಮಾದರಿ ತಯಾರಿ” ಸ್ಪರ್ಧೆಯಲ್ಲಿ ಹೈಸ್ಕೂಲು ವಿಭಾಗದಿಂದ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದು, ಹಾಸನದಲ್ಲಿ ಜರುಗಲಿರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

Also Read  ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಹಮ್ಮಿಕೊಂಡ ತುಳು ಲೇಖನ ಸ್ಪರ್ಧಾ ವಿಜೇತರ ಆಯ್ಕೆ

error: Content is protected !!