ಮಂಗಳೂರು: ಗಾಂಜಾ ದಂಧೆ ಪ್ರಕರಣದಲ್ಲಿ ವೈದ್ಯ ಸೇರಿ ಮತ್ತೆ ಮೂವರು ಅರೆಸ್ಟ್..! ➤  ಬಂಧಿತರ ಸಂಖ್ಯೆ 13ಕ್ಕೆ ಏರಿಕೆ                                

crime, arrest, suspected


(ನ್ಯೂಸ್ ಕಡಬ) newskadaba.com  ಮಂಗಳೂರು, ಜ.12. ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಿರುವ ಕುರಿತು ವರದಿಯಾಗಿದೆ.







ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ MD ವಿದ್ಯಾರ್ಥಿ, ತುಮಕೂರು ಮೂಲದ ಡಾ.ಹರ್ಷ ಕುಮಾರ್, ಫಾರ್ಮಸಿ ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಬೆಂಗ್ರೆ ನಿವಾಸಿ ಮುಹಮ್ಮದ್ ಅಫ್ರಾರ್(23) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯನ್ನು ಬಂಧಿಸಿದ್ದರು. ಈ ಪೈಕಿ ನಾಲ್ವರು ಯುವತಿಯರೂ ಸೇರಿದ್ದಾರೆ. ಇದೀಗ ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.






 

error: Content is protected !!
Scroll to Top