ಗೃಹ ಸಚಿವ ಆರಗ ಜ್ಞಾನೇಂದ್ರ ಮನೆ ಮುಂದೆಯೇ ಪೊಲೀಸ್ ಪೇದೆ ಆತ್ಮಹತ್ಯೆ ಯತ್ನ.!!



(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12.  ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯ ಮುಂದೆ ಪೊಲೀಸ್​ ಪೇದೆಯೊಬ್ಬರು ಆತ್ಮಹತ್ಯೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.





ಆತ್ಮಹತ್ಯೆಗೆ ಯತ್ನಿಸಿದ ಪೇದೆಯನ್ನು ಹೆಗಡೆ ನಗರದ ನಿವಾಸಿ ನವೀನ್‌ ಕುಮಾರ್‌ (25) ಎಂದು ಗುರುತಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವರ ಮನೆ ಮುಂದೆ ಎಡಗೈ ಕುಯ್ದುಕೊಂಡು ನಿತ್ರಾಣನಾಗಿ ನವೀನ್‌ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದರು ಎನ್ನಲಾಗಿದೆ. ವೈದ್ಯಕೀಯ ಚಿಕಿತ್ಸೆಗೆ ಕಾನ್‌ಸ್ಟೇಬಲ್‌ ಸ್ಪಂದಿಸುತ್ತಿದ್ದು, ಆತ ಪ್ರಾಣಪಾಯದಿಂದ ಸುರಕ್ಷಿತವಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.






error: Content is protected !!
Scroll to Top